ನಾನ್ ವೆಜ್ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ!

newsics.com ಮುಂಬೈ : ನಾನ್ ವೆಜ್ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಸೃಷ್ಟಿ ಸೋಮವಾರ ಅಂಧೇರಿಯ ಮರೋಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೃಷ್ಟಿ ತನ್ನ ಬಾಯ್ ಫ್ರೆಂಡ್ ಜೊತೆಗಿನ ಜಗಳದ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೃಷ್ಟಿ ಬಾಯ್ಫ್ರೆಂಡ್, 27 ವರ್ಷದ ಆದಿತ್ಯ ಪಂಡಿತ್‌ನನ್ನು ಪೊವೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಅಂಧೇರಿ(ಪೂರ್ವ)ಯಲ್ಲಿರುವ ಮರೋಲ್ ಪೊಲೀಸ್ ಕ್ಯಾಂಪ್‌ನ ಹಿಂಭಾಗದ ಬಾಡಿಗೆ ನಿವಾಸದಲ್ಲಿ ಸೃಷ್ಟಿ ಶವವಾಗಿ ಪತ್ತೆಯಾಗಿದ್ದಾಳೆ.