newsics.com
ಬೆಂಗಳೂರು: ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಇದು ಸದ್ಯ ಚರ್ಚೆಗೆ ಗ್ರಾಸವಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಚಾನ್ಸಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿ ಚಾನ್ಸಲರ್ ಆಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ.
ಹೆಚ್.ಕೆ.ಪಾಟೀಲ್, ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯ. ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದಿಸಿದ್ದು, ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.