newsics.com
ತುಮಕೂರು: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ವೇದಿಕೆ ಸಿದ್ಧವಾಗಿದೆ.
ಪಿ.ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎಗೆ ಹಸ್ತಾಂತರ ಮಾಡಲಾಗಿದೆ.
ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 150 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಎಲ್ಲ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಕೂಲ ಆಗಲಿದೆ.
ತುಮಕೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯ ಬಗ್ಗೆ ಮಾತನಾಡಿದ ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್, ತುಮಕೂರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಇದೇ ವೇಳೆ ತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮುಂತಾದವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
ಈ ಹೊಸ ಕ್ರೀಡಾಂಗಣ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಖ್ಯಾತಿಗೆ ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ
Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ