Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಾರಾಷ್ಟ್ರ: ಸಿಎಂ ಹೆಸರು ಘೋಷಣೆ ಮುನ್ನವೇ ಪ್ರಮಾಣವಚನ ಸಮಾರಂಭ ಫಿಕ್ಸ್, ಮೋದಿ ಭಾಗಿ
ದೇಶಪ್ರಮುಖ

ಮಹಾರಾಷ್ಟ್ರ: ಸಿಎಂ ಹೆಸರು ಘೋಷಣೆ ಮುನ್ನವೇ ಪ್ರಮಾಣವಚನ ಸಮಾರಂಭ ಫಿಕ್ಸ್, ಮೋದಿ ಭಾಗಿ

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರ ಮೈತ್ರಿಕೂಟ ಮಹಾಯುತಿಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ.

ಈ ಮಧ್ಯೆ, ಡಿಸೆಂಬರ್ 5ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಗಾದಿಗಾಗಿ ಮಹಾಯುತಿಯ ಮೂರು ಘಟಕಗಳಾದ ಬಿಜೆಪಿ, ಎನ್‌ಸಿಪಿ ಮತ್ತು ಶಿವಸೇನೆ ನಡುವಿನ ಜಗಳದ ನಡುವೆಯೇ ಪ್ರಮಾಣವಚನ ಸ್ವೀಕಾರದ ದಿನಾಂಕ ಘೋಷಣೆಯಾಗಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರದ ಮುಂದಿನ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ಮೈತ್ರಿಕೂಟವು ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಲಾಗಿದೆ. ಆದರೆ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಇನ್ನೂ ಮುಖ್ಯಮಂತ್ರಿ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಮುಂದಿನ ಮುಖ್ಯಮಂತ್ರಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೈಗೊಂಡ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ನಿರ್ಗಮಿತ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಘೋಷಿಸಿದ್ದರು. ಬಳಿಕ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಜತೆ ಏಕನಾಥ್ ಶಿಂಧೆ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು.

ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯ ಸೋಲಿನಿಂದ ಚೇತರಿಸಿಕೊಂಡ ಬಿಜೆಪಿ 132 ಕ್ಷೇತ್ರಗಳನ್ನು ಗೆದ್ದುಕೊಂಡಿತು. ಇದು ಮಹಾಯುತಿಯ ಎಲ್ಲಾ ಮಿತ್ರಪಕ್ಷಗಳಲ್ಲಿ ಅತ್ಯಧಿಕವಾಗಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಕೂಡ ಉತ್ತಮ ಪ್ರದರ್ಶನ ನೀಡಿವೆ. ಶಿವಸೇನೆ 57, ಎನ್‌ಸಿಪಿ 41 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

https://x.com/ANI/status/1862851078615904718

Birth Numbers | ನೀವು ಜನ್ಮಸಂಖ್ಯೆಗನುಗುಣವಾಗಿ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗಬಹುದು!

TAGGED:Maharashtra: The swearing-in ceremony was fixed before the announcement of the CM's nameModi participated
Share This Article
Facebook Twitter Copy Link Print
Previous Article Birth Numbers | ನೀವು ಜನ್ಮಸಂಖ್ಯೆಗನುಗುಣವಾಗಿ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗಬಹುದು!
Next Article Today’s almanac | ಶುಭ ದಿನ, ಕಾರ್ತೀಕ ಮಾಸ ಕೃಷ್ಣ ಪಕ್ಷ ಅಮಾವಾಸ್ಯೆ, 01-12-2024, ಭಾನುವಾರ, ಛಟ್ಟಿ ಅಮಾವಾಸ್ಯೆ/ ಮಾರ್ಗಶಿರ ಅಮಾವಾಸ್ಯೆ, ವಿಶ್ವ ಏಡ್ಸ್ ದಿನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?