newsics.com
ಕಾರವಾರ (ಉತ್ತರ ಕನ್ನಡ): ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂ ಕಂಪನದ ಅನುಭವವಾಗಿದೆ.
ಕುಮಟಾ ತಾಲೂಕಿನ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಳದಲ್ಲಿ 3 ಸೆಕೆಂಡ್ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಜನರು ಬೆಚ್ಚಿಬಿದ್ದಿದ್ದಾರೆ
ಇದೇ ವರ್ಷ ಮಳೆಗಾಲದಲ್ಲಿ ಕುಮಟಾ ತಾಲೂಕಿನ ಬರ್ಗಿ, ಸಿದ್ದಾಪುರ-ಕುಮಟಾ ಮಾರ್ಗದ ಉಳ್ಳೂರಮಠ ಕ್ರಾಸ್ ಬಳಿ ಗುಡ್ಡ ಕುಸಿತವಾಗಿತ್ತು. ಸುಮಾರು ಮುಕ್ಕಾಲು ಕಿಲೋಮಿಟರ್ ದೂರದಿಂದ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದಿತ್ತು.
ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿತ್ತು. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದರು. ಕೆಲವರ ಮೃತದೇಹಗಳು ಹೆದ್ದಾರಿ ಪಕ್ಕದಲ್ಲೇ ಇದ್ದ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದವು.
ಗುಡ್ಡ ಕುಸಿದು ಅಪಾರ ಪ್ರಮಾಣದ ಮಣ್ಣು ಗಂಗಾವಳಿ ನೀರಿನಲ್ಲಿ ಬಿದ್ದಿದ್ದರಿಂದ ನೀರು ಉಕ್ಕಿ ಪಕ್ಕದ ಉಳುವರೆ ಗ್ರಾಮದೊಳಕ್ಕೆ ನುಗ್ಗಿತ್ತು. ಇದರಿಂದ ಆರು ಮನೆಗಳು ಸಂಪೂರ್ಣ ನಾಶವಾಗಿದ್ದವು. 30ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಗೊಳಗಾಗಿದ್ದವು.
Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?