newsics.com
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಭಾರತ ಮೂಲದ ಕಶ್ಯಪ್ (ಕಾಶ್) ಪಟೇಲ್ ಹೆಸರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನ ಮುಂದಿನ ನಿರ್ದೇಶಕರಾಗಿ ಸೇವೆ ಸಲ್ಲಿಸಲು ನಾಮನಿರ್ದೇಶನ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ, ಟ್ರಂಪ್, ಪಟೇಲ್ ಅವರ ನಾಮನಿರ್ದೇಶನವನ್ನು ಘೋಷಿಸಿದರು.
ಟ್ರಂಪ್ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಕಶ್ಯಪ್ ಅವರು ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ರಕ್ಷಣಾ ಇಲಾಖೆಯಲ್ಲಿ ಸಿಬ್ಬಂದಿ ಮುಖ್ಯಸ್ಥರಾಗಿ, ರಾಷ್ಟ್ರೀಯ ಗುಪ್ತಚರ ಉಪ ನಿರ್ದೇಶಕರಾಗಿ ಮತ್ತು ಭಯೋತ್ಪಾದನೆ ನಿಗ್ರಹದ ಹಿರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
ಕಶ್ಯಪ್ ‘ಕಾಶ್’ ಪಟೇಲ್ ಅವರು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ಮುಂದಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಟ್ರಂಪ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?
Menstrual fluctuations | ಋತುಚಕ್ರ ಏರುಪೇರಾಗ್ತಿದ್ಯಾ? ಮುಟ್ಟು ಹೆಚ್ಚು ಕಮ್ಮಿಯಾಗಲು ಈ ಅಂಶಗಳೇ ಕಾರಣ!