newsics.com
ಬೆಂಗಳೂರು/ಮಂಡ್ಯ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿರುವುದರಿಂದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಭತ್ತದ ಕೊಯ್ಲು ಆರಂಭವಾಗಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೊಯ್ಲು ಮಾಡಿದ ಭತ್ತದ ಗದ್ದೆಗಳಲ್ಲಿ ನೀರು ನಿಂತು ನಷ್ಟ ಅನುಭವಿಸುವಂತಾಗಿದೆ. ರಾಗಿ, ಕಾಫಿ ಬೆಳೆಗಾರರೂ ಮಳೆಯಿಂದ ನಷ್ಟ ಅನುಭವಿಸುವಂತಾಗಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಪುರದದೊಡ್ಡಿ ಗ್ರಾಮದ ನಾಗೇಶ್ ಅವರು ಭತ್ತದ ಕೊಯ್ಲು ಮಾಡಿದ್ದರು. ಅದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭತ್ತದ ಗದ್ದೆ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಭತ್ತ ಪೂರ್ತಿ ನೆನೆದುಹೋಗಿದೆ. ಇದರಿಂದಾಗಿ ಫಸಲು ಕೈ ಸೇರುವ ಮುನ್ನವೇ ನಷ್ಟಕ್ಕೊಳಗಾಗಿದೆ.
ರೇಷ್ಮೆ ಹುಳು ಸಾಕಾಣಿಕೆಯಲ್ಲೂ ಹಿಪ್ಪುನೇರಳೆ ಸೊಪ್ಪಿನ ಮೇಲೆ ಮಳೆ ಬೀಳುವುದರಿಂದ ಹುಳುಗಳಿಗೂ ಅದನ್ನು ಹಾಕಲಾರದ ಸ್ಥಿತಿ ನಿರ್ಮಾಣವಾಗಿದೆ.
Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್‌ಗಳು, ವಿಡಿಯೋ ವೈರಲ್
Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ