newsics.com
ಚೆನ್ನೈ: ಫೆಂಗಲ್ ಚಂಡಮಾರುತದಿಂದ ತಮಿಳುನಾಡು, ಪುದುಚೇರಿಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಬೆಳಗ್ಗೆ 10 ಗಂಟೆಗೆ ಕೃಷ್ಣಗಿರಿಯ ಉತ್ತಂಗರೈನಲ್ಲಿ 503 ಮಿ.ಮೀ. ಮಳೆಯಾಗಿದೆ. ಧರ್ಮಪುರಿಯ ಹರೂರಿನಲ್ಲಿ 331 ಮಿ.ಮೀ. ಮಳೆ ದಾಖಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ.
ಫೆಂಗಲ್ ಚಂಡಮಾರುತದಿಂದಾಗಿ ಭಾನುವಾರ ಕೃಷ್ಣಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಉತ್ತಂಗರೈ ತಾಲೂಕಿನಲ್ಲಿ 503 ಮಿ.ಮೀ. ಅತಿ ಹೆಚ್ಚು ಮಳೆ ದಾಖಲಾಗಿದೆ. ಸಾಲಾಗಿ ನಿಲ್ಲಿಸಲಾಗಿದ್ದ ಬಸ್‌ಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿರುವ ವಿಡಿಯೋ ವೈರಲ್ ಆಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯು ಕಳೆದ ಎರಡು ದಿನಗಳಲ್ಲಿ ಹೆಚ್ಚು ಹಾನಿಗೊಳಗಾಗಿದ್ದು, ಹಲವಾರು ವಾಹನಗಳು ನೀರಿನಲ್ಲಿ ಮುಳುಗಿವೆ. ಇನ್ನಷ್ಟು ವಾಹನಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ
ಕೃಷ್ಣಗಿರಿಯ ಉತ್ತಂಗಿರಿ ಬಸ್ ನಿಲ್ದಾಣದಲ್ಲಿ ಹಲವಾರು ಬಸ್‌ಗಳು ಮತ್ತು ಇತರ ವಾಹನಗಳು ನೀರಿನಲ್ಲಿ ಮುಳುಗಿರುವ ದೃಶ್ಯಗಳು ವೈರಲ್ ಆಗಿವೆ. ಕೆಲವು ಬಸ್ಸುಗಳು ಮತ್ತು ಕಾರುಗಳು ವೇಗವಾಗಿ ಹರಿಯುವ ಪ್ರವಾಹದಲ್ಲಿ ನಿಧಾನವಾಗಿ ಕೊಚ್ಚಿಹೋಗಿವೆ..
ಕೃಷ್ಣಗಿರಿ ಜಿಲ್ಲೆಯಲ್ಲಿ ಸತತ 14 ಗಂಟೆಗಳ ಕಾಲ ಭಾರೀ ಮಳೆಯಾಗುತ್ತಿದೆ ಮತ್ತು ಉತ್ತಂಗರೈ ಪ್ರದೇಶದಲ್ಲಿ ಕಳೆದ ರಾತ್ರಿ ಅತಿ ಹೆಚ್ಚು ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುದುಚೇರಿಯಲ್ಲಿ ಪ್ರವಾಹದಲ್ಲಿ ಮುಳುಗಿದ್ದ ಮನೆಯೊಂದರಲ್ಲಿ ಸಿಲುಕಿದ್ದ ಶಿಶುವನ್ನು ಭಾರತೀಯ ಸೇನೆ ರಕ್ಷಿಸಿದೆ.
ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ. ನೀಲಗಿರಿ, ಈರೋಡ್ ಕೊಯಮತ್ತೂರು, ತಿರುಪುರ್, ದಿಂಡಿಗಲ್, ಕೃಷ್ಣಗಿರಿ, ಸೇಲಂ, ನಾಮಕ್ಕಲ್, ತಿರುಚ್ಚಿ, ಕರೂರ್, ಮಧುರೈ ಮತ್ತು ತೇಣಿ. ಒರಟಾದ ಹವಾಮಾನದಿಂದಾಗಿ ಕರ್ನಾಟಕ ಮತ್ತು ಅದರ ಸಮೀಪದ ಜಿಲ್ಲೆಗಳಲ್ಲಿ ಮಂಗಳವಾರದವರೆಗೆ ಭಾರೀ ಮಳೆಯಾಗಲಿದೆ ಎಂದು IMD ‘ಆರೆಂಜ್’ ಎಚ್ಚರಿಕೆಯನ್ನು ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಇಂದು ತಮಿಳುನಾಡಿನ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು.
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಕಾರ, ರಾಜ್ಯದಾದ್ಯಂತ 7,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 147 ಆಶ್ರಯ ಶಿಬಿರಗಳಲ್ಲಿ ಇರಿಸಲಾಗಿದೆ.
Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ