newsics.com
ವಿಶ್ವವಿಖ್ಯಾತ ತಾಜ್ ಮಹಲ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆಗ್ರಾ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ತಾಜ್ ಮಹಲ್ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಮೇಲ್ ಸ್ವೀಕರಿಸಿದ ಕೂಡಲೇ ಭದ್ರತಾ ಅಧಿಕಾರಿಗಳು ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್ ಮಹಲ್ ಸ್ಮಾರಕದ ಮೂಲೆ ಮೂಲೆಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.

ಹೌದು, ಆಗ್ರಾದ ತಾಜ್‌ಮಹಲ್‌ನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ನಂತರ ಅದು ಸುಳ್ಳು ಕರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡ ಮತ್ತು ಸ್ಥಳೀಯ ಪೊಲೀಸರು ಮೊಘಲ್ ಸ್ಮಾರಕವಾದ ತಾಜ್ ಮಹಲ್ಗೆ ಧಾವಿಸಿ ದೇಶದ ಪ್ರಮುಖ ಪ್ರವಾಸಿ ಸ್ಥಳದ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಗ್ರಾದಲ್ಲಿರುವ ಉತ್ತರ ಪ್ರದೇಶ ಪ್ರವಾಸೋದ್ಯಮದ ಪ್ರಾದೇಶಿಕ ಕಚೇರಿಗೆ ಮಂಗಳವಾರ ತಾಜ್‌ಮಹಲ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದಿದ್ದು, ನಂತರ ಅದು ಸುಳ್ಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.