newsics.com
ದೆಹಲಿ: ಒಂದೇ ಕುಟುಂಬದ ಮೂವರನ್ನು ಹತ್ಯೆ ಮಾಡಿತುವ ಘಟನೆ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ನಡೆದಿದೆ.
ಒಂದೆ ಕುಟುಂಬದ ಮೂವರನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಪತಿ, ಪತ್ನಿ ಮತ್ತು ಮಗಳನ್ನು ಕೊಲೆ ಮಾಡಲಾಗಿದೆ. ಅವರ ಮಗನಾದ ಕುಟುಂಬದ ನಾಲ್ಕನೇ ಸದಸ್ಯ ವಾಕಿಂಗ್ಗೆ ಹೋಗಿದ್ದರಿಂದ ಪಾರಾಗಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ.
ವೈಜ್ಞಾನಿಕ ತಂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ. ಸಾವಿನ ಸಮಯವನ್ನು ಖಚಿತಪಡಿಸಿಕೊಳ್ಳಲು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ