newsics.com
ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಈತ ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ. ಅಲ್ಲದೇ, ಶಿವಕುಮಾರ ಸ್ವಾಮೀಜಿ ಪುತ್ಥಳಿ ಒಡೆಯಲು ಕನಸಿನಲ್ಲಿ ಬಂದ ಏಸು ಹೇಳಿದ್ದನಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಇನ್ನು 7 ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂಧನಂತೆ ವರ್ತಿಸುತ್ತಿದ್ದ. ಹೀಗಾಗಿ, ಶಿವಕುಮಾರ ಸ್ವಾಮೀಜಿ ಪುತ್ಥಳಿಯನ್ನು ಒಡೆಯಲು ಪ್ಲಾನ್ ಮಾಡಿಕೊಂಡಿದ್ದ.