newsics.com
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಸೆಟ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಸ್ವತಃ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ ದೂರು ನೀಡುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದರು.
ಈ ಬಗ್ಗೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದಂತೆ ಟಾಕ್ಸಿಕ್ ಸಿನಿಮಾದ ನಿರ್ಮಾಪಕರು ಕೋರ್ಟ್ ಮೊರೆ ಹೋಗಿದ್ದು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸದಂತ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ ಕೆನರಾ ಬ್ಯಾಂಕ್‌ನಿಂದ ಪೀಣ್ಯದ ಬಳಿ ಲೀಸ್‌ಗೆ ಪಡೆದಿದ್ದ ಖಾಲಿ ಜಾಗದಲ್ಲಿ ದೊಡ್ಡದಾಗಿ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ, ಈ ಜಾಗದ ಬಗ್ಗೆ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಕೇಂದ್ರ ಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ನಡುವಿನ ವೈಷಮ್ಯಕ್ಕೆ ಟಾಕ್ಸಿಕ್ ಚಿತ್ರತಂಡವನ್ನು ಬಲಿಪಶು ಮಾಡಲು ಹೊರಟಿದ್ದರು. ಹೀಗಾಗಿ, ಟಾಕ್ಸಿಕ್ ಚಿತ್ರತಂಡ ಸೆಟ್ ಹಾಕಿದ್ದ ಜಾಗವು ಅರಣ್ಯ ಇಲಾಖೆಗೆ ಸೇರಿದ್ದು, ಇಲ್ಲಿ ಮರಗಳನ್ನು ಕಡಿದು ಮಾರಣ ಹೋಮ ಮಾಡಲಾಗಿದೆ ಎಂದು ಎಫ್‌ಐಆರ್ ದಾಖಲಿಸಿ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಈ ಬಗ್ಗೆ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.