newsics.com
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ಸಂಸದರು ʼಮೋದಿ – ಅದಾನಿ ಏಕ್ ಹೈʼ ಎಂದು ಬರೆಯಲಾಗಿದ್ದ ಕಪ್ಪು ಬಣ್ಣದ ಜಾಕೆಟ್ಗಳನ್ನು ಧರಿಸಿ ಇಂದು ಸಂಸತ್ತಿನ ಸಂಕೀರ್ಣದಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
‘ಮೋದಿಯವರು ಅದಾನಿ ಅವರನ್ನು ತನಿಖೆ ಮಾಡಲು ಸಾಧ್ಯವಿಲ್ಲ ಏಕೆಂದರೆ ಅವರು ಹಾಗೆ ಮಾಡಿದರೆ, ಅವರು ಸ್ವತಃ ತನಿಖೆಗೆ ಒಳಗಾಗುತ್ತಾರೆ.
https://twitter.com/i/status/1864539188126970119
ಮೋದಿ ಔರ್ ಅದಾನಿ ಏಕ್ ಹೈ. ದೋ ನಹೀ ಹೈ, ಏಕ್ ಹೈ,” ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಸಂದರ್ಭದಲ್ಲಿ ಹೇಳಿದರು. ಇನ್ನು ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ತಮ್ಮ ಬೇಡಿಕೆಯ ಪರವಾಗಿ ಘೋಷಣೆಗಳನ್ನು ಕೂಗಿದ್ದು, ಸಂಸತ್ತಿನ ಮುಖ್ಯ ದ್ವಾರದಲ್ಲಿ “ಮೋದಿ-ಅದಾನಿ ಒಂದೇ” ಎಂಬ ಬ್ಯಾನರ್ ಹಿಡಿದು ಪ್ರದರ್ಶಿಸಿದರು.