Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care: ಎಣ್ಣೆ ಹೊಡೆದ್ರೆ ಶೀತ, ಕೆಮ್ಮು ನಿವಾರಣೆ ಆಗುತ್ತಾ?
ಆರೋಗ್ಯಪ್ರಮುಖಲೈಫ್‌ಸ್ಟೈಲ್

Health Care: ಎಣ್ಣೆ ಹೊಡೆದ್ರೆ ಶೀತ, ಕೆಮ್ಮು ನಿವಾರಣೆ ಆಗುತ್ತಾ?

Share
2 Min Read
SHARE

newsics.com

ಚಳಿಗಾಲದಲ್ಲಿ ಅನೇಕ ಮಂದಿ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುತ್ತಾರೆ. ಮೆಟ್ರೋ, ಬಸ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಕೆಮ್ಮುವುದನ್ನು ನೀವು ಕಾಣಬಹುದು. ಒಮ್ಮೆ ನೆಗಡಿ ಬಂದರೆ ಎಷ್ಟೋ ಮಂದಿಗೆ ವಾರಗಳೇ ಕಳೆದರೂ ಗುಣವಾಗುವುದಿಲ್ಲ.

ಈ ಸಮಸ್ಯೆಗಳನ್ನು ಬಗೆಹರಿಸಲು ಅನೇಕ ಮನೆಮದ್ದುಗಳಿವೆ. ಆದರೂ ಕೆಲವರು ಮದ್ಯಪಾನ ಮಾಡುವುದರಿಂದ ಶೀತ ಮತ್ತು ಕೆಮ್ಮು ನಿವಾರಣೆ ಆಗುತ್ತದೆ ಎಂದು ಹೇಳುತ್ತಾರೆ.
ಇನ್ನೂ ಈ ಬಗ್ಗೆ ನ್ಯೂಸ್18 ಜೊತೆಗೆ ಮಾತನಾಡಿರುವ, ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ಪ್ರಿವೆಂಟಿವ್ ಹೆಲ್ತ್ ಅಂಡ್ ವೆಲ್ ನೆಸ್ ವಿಭಾಗದ ನಿರ್ದೇಶಕಿ ಡಾ.ಸೋನಿಯಾ ರಾವತ್ ಅವರು, ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮು ಸಮಸ್ಯೆ ಸಾಮಾನ್ಯ. ಈ ಸಮಸ್ಯೆ ನಿವಾರಣೆಗೆ ಒಂದಿಷ್ಟು ಔಷಧಗಳನ್ನು ನೀಡಲಾಗುತ್ತದೆ. ಇದರ ಜೊತೆಗೆ ಶೀತ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಸೂಚಿಸಲಾಗುತ್ತದೆ. ವಿಪರೀತ ಶೀತ ಮತ್ತು ಕೆಮ್ಮು ಇದ್ದಾ ಶುಂಠಿ, ಬೆಳ್ಳುಳ್ಳಿ ಮತ್ತು ಬಿಸಿನೀರು ಕುಡಿಯಲು ಸಲಹೆ ನೀಡಲಾಗುತ್ತದೆ. ಈ ಮನೆಮದ್ದುಗಳು ಶೀತ ಮತ್ತು ಕೆಮ್ಮಿನಿಂದ ಪರಿಹಾರವನ್ನು ನೀಡಬಲ್ಲವು. ಜೊತೆಗೆ ಗಂಟಲು ನೋವು ಕೂಡ ನಿವಾರಿಸುತ್ತದೆ ಎಂದು ಹೇಳಿದ್ದಾರೆ.
ಆಲ್ಕೋಹಾಲ್ ಕುಡಿಯುವುದರಿಂದ ಶೀತ ಮತ್ತು ಕೆಮ್ಮು ಗುಣವಾಗುತ್ತದೆ ಎಂಬ ವಿಚಾರ ಇನ್ನೂ ವೈದ್ಯಕೀಯವಾಗಿ ಸಾಬೀತಾಗಿಲ್ಲ. ಅಲ್ಲದೇ ಮದ್ಯ ಆಲ್ಕೋಹಾಲ್ ಅಂಶವನ್ನು ಹೊಂದಿರುವುದರಿಂದ ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಹಾಗಾಗಿ ಶೀತ ಮತ್ತು ಕೆಮ್ಮಿನಿಂದ ಪರಿಹಾರ ಪಡೆಯಬಹುದು ಎಂಬ ಉದ್ದೇಶದಿಂದ ಎಂದಿಗೂ ಮದ್ಯಪಾನ ಮಾಡಬೇಡಿ. ಅದರಲ್ಲೂ ಮದ್ಯಪಾನ ಸೇವಿಸದೇ ಇರುವವರಂತೂ ಮದ್ಯಪಾನ ಮಾಡುವುದಕ್ಕೆ ಮುಂದಾಗಬೇಡಿ. ಅನೇಕ ಮಂದಿ ನೆಗಡಿ ಹಾಗೂ ಶೀತಕ್ಕೆ ಮದ್ಯಪಾನ ಮನೆಮದ್ದು ಎಂದು ತೆಗೆದುಕೊಳ್ಳಲು ಆರಂಭಿಸಿ, ನಂತರ ಅದಕ್ಕೆ ವ್ಯಸನಿಯಾಗುತ್ತಾರೆ. ಆದರೆ ಯಾವುದೇ ಸಮಸ್ಯೆಗಳಿಗೂ ಮದ್ಯಪಾನ ಪರಿಹಾರವಲ್ಲ ಎಂಬುದನ್ನು ಜನರು ತಿಳಿದುಕೊಳ್ಳಬೇಕು. ಇಂತಹ ವದಂತಿಗಳಿಗೆ ಯಾರೂ ಸಹ ಕಿವಿ ಕೊಡಬಾರದು ಎಂದು ವೈದ್ಯೆ ಸೋನಿಯಾ ರಾವತ್ ಹೇಳಿದ್ದಾರೆ.
ಆರೋಗ್ಯ ತಜ್ಞರ ಪ್ರಕಾರ, ಚಳಿಗಾಲದಲ್ಲಿ ತಾಪಮಾನವು ಕಡಿಮೆಯಾಗುತ್ತದೆ. ಶೀತ ಮತ್ತು ಕೆಮ್ಮಿನಂತಹ ವೈರಲ್ ಸೋಂಕುಗಳು ಹೆಚ್ಚಾಗುತ್ತದೆ. ಈ ಸೋಂಕು ಜನರಲ್ಲಿ ವೇಗವಾಗಿ ಹರಡುತ್ತದೆ ಮತ್ತು ಅನೇಕ ಮಂದಿ ಈ ಸಮಸ್ಯೆಗೆ ಒಳಗಾಗುತ್ತಾರೆ. ಅದರಲ್ಲೂ ಶೀತ ಹೆಚ್ಚಾದಾಗ ಕೆಲ ಬಾರಿ ಜ್ವರದಿಂದ ಸಾವನ್ನಪ್ಪಿರುವ ಉದಾಹರಣೆಗಳಿವೆ.
ಹಾಗಾಗಿ ಚಳಿಗಾಲದಲ್ಲಿ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಜನರು ಮನೆಯಿಂದ ಹೊರಗೆ ಹೋಗುವಾಗ ಬೆಚ್ಚಗಿನ ಬಟ್ಟೆಗಳನ್ನು ಧರಿಸಬೇಕು ಮತ್ತು ಮಾಸ್ಕ್ಗಳನ್ನು ಬಳಸಬೇಕು. ಯಾವಾಗಲೂ ಬಿಸಿ, ಬಿಸಿಯಾದ ಆಹಾರವನ್ನೇ ಸೇವಿಸಬೇಕು. ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ 30 ರಿಂದ 60 ನಿಮಿಷಗಳ ಕಾಲ ದೈಹಿಕ ಚಟುವಟಿಕೆಯನ್ನು ಮಾಡಬೇಕು. ಈ ಎಲ್ಲಾ ನಿಯಮಗಳನ್ನು ಅನುಸರಿಸಿದ ನಂತರ ಕೂಡ ಯಾವುದಾದರೂ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ.

TAGGED:Health Care: Does oil cure cold and cough?
Share This Article
Facebook Twitter Copy Link Print
Previous Article Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ
Next Article Bigg Boss ವಿಚಿತ್ರ ಧ್ವನಿಯಲ್ಲಿ ಡೈಲಾಗ್ ಹೊಡೆದ ಭವ್ಯಾ ಮತ್ತು ಗೋಲ್ಡ್ ಸುರೇಶ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?