Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SM Krishna,‌ SM ಕೃಷ್ಣಗೆ ‘ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ
ಕರ್ನಾಟಕಪ್ರಮುಖ

SM Krishna,‌ SM ಕೃಷ್ಣಗೆ ‘ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ

Share
1 Min Read
SHARE

newsics.com

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿದ್ದು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.

ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

ಶ್ರೀ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ @siddaramaiah ಅವರಲ್ಲಿ ಮನವಿ ಮಾಡಿದ್ದಾರೆ.

TAGGED:Demand for posthumous award of 'Karnataka Ratna' to SM Krishna
Share This Article
Facebook Twitter Copy Link Print
Previous Article Skin Care: ಚಳಿಗಾಲದಲ್ಲಿ ಯಾವ ದುಬಾರಿ ಲೋಷನ್‌ ಬೇಕಾಗಿಲ್ಲ: ಈ ಎಣ್ಣೆ ಬಳಸಿ ಸಾಕು
Next Article Crime ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡ ಯುವಕರು

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?