newsics.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆಗೆ ನಿರ್ಧಾರವಾಗಲಿದೆ.
ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿಂದ ಹೊರಗಿದ್ದಾರೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಆಪರೇಷನ್ ಆಗಿಲ್ಲ.
ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ.