newsics.com
ಚೆನ್ನೈ: ತಮಿಳುನಾಡಿನ ದಿಂಡಿಗಲ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಓರ್ವ ಮಗು ಸೇರಿ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಆಸ್ಪತ್ರೆಯೊಳಗೆ ನೂರಕ್ಕೂ ಹೆಚ್ಚು ರೋಗಿಗಳು ಒಳಗೆ ಸಿಲುಕಿಕೊಂಡಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ.
ಈ ಆಸ್ಪತ್ರೆ ನಾಲ್ಕು ಮಹಡಿಗಳನ್ನು ಹೊಂದಿದೆ. ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು 50ಕ್ಕೂ ಹೆಚ್ಚು ಖಾಸಗಿ ಆಂಬುಲೆನ್ಸ್ಗಳನ್ನು ಕರೆಸಲಾಗಿತ್ತು.
ತಿರುಚ್ಚಿ ರಸ್ತೆಯಲ್ಲಿರುವ ಸಿಟಿ ಆಸ್ಪತ್ರೆಯಲ್ಲಿ ಈ ಅವಘಡ ಸಂಭವಿಸಿದೆ. ಲಿಫ್ಟ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಏಳು ಜನರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪ್ರಯೋಜನವಾಗಲಿಲ್ಲ.
ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.
Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ
Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ