newsics.com
ಕೊಲ್ಕತ್ತಾ : ಪಶ್ಚಿಮ ಬಂಗಾಳದ ಕೊಲ್ಕತ್ತಾದ ಟೋಲಿಗಂಜ್ ಪ್ರದೇಶದಲ್ಲಿ ಇಂದು ಮಹಿಳೆಯ ತಲೆ ಕತ್ತರಿಸಿದ ತಲೆಯನ್ನು ಕಸದ ರಾಶಿಯಿಂದ ವಶಪಡಿಸಿಕೊಳ್ಳಲಾಗಿದೆ.
ಗಾಲ್ಫ್ ಗ್ರೀನ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಹಾಂ ರಸ್ತೆಯ ವ್ಯಾಟ್ನಲ್ಲಿ ಇಂದು ಮುಂಜಾನೆ ಸ್ಥಳೀಯರು ಕಸದ ರಾಶಿಯಲ್ಲಿ ಅನುಮಾನಾಸ್ಪದವಾಗಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ್ದಾರೆ. ಅದರಿಂದ ರುಂಡ ಭಾಗ ಹೊರಗೆ ಕಾಣುತ್ತಿದ್ದುದರಿಂದ ಗಾಬರಿಯಾದ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದಕ್ಷಿಣ ಉಪನಗರ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಗಳು, ಸ್ಥಳೀಯ ಪೊಲೀಸ್ ಠಾಣೆಗಳ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು. ತುಂಡರಿಸಿದ ತಲೆಯನ್ನು ಹೆಚ್ಚಿನ ಪರೀಕ್ಷೆಗಾಗಿ ಎಂಆರ್ ಬಂಗೂರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಕಸದ ರಾಶಿಯಿಂದ ಮಾನವನ ದೇಹದ ಭಾಗ ಪತ್ತೆಯಾಗಿದೆ. ಸದ್ಯ ಪ್ರಾಥಮಿಕ ಹಂತದಲ್ಲಿ ತನಿಖೆ ಆರಂಭಿಸಲಾಗಿದೆ. ದೇಹದ ಉಳಿದ ಭಾಗಗಳನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ” ಎಂದು ಉಪ ಪೊಲೀಸ್ ಆಯುಕ್ತರಾದ ಬಿದಿಶಾ ಕಲಿತಾ ಹೇಳಿದ್ದಾರೆ