newsics.com
ಬೆಂಗಳೂರು : ನೀರಿನೊಳಗೆ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಡ್ರೋನ್ ಪ್ರತಾಪ್ನನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಮಿಡಿಗೇಶಿ ಪೊಲೀಸರ ವಶಕ್ಕೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶ ಹೊರಡಿಸಿದೆ. ನಿನ್ನೆ(ಡಿಸೆಂಬರ್ 12) ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ರನ್ನ ಬಂಧಿಸಿ ಇಂದು (ಡಿಸೆಂಬರ್ 13) ಮಧುಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ.
ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಡ್ರೋನ್ ಪ್ರತಾಪ್ನನ್ನು ಮೂರು ದಿನ ಮಿಡಿಗೇಶಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.