Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?
ಕರ್ನಾಟಕಪ್ರಮುಖ

Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?

Share
2 Min Read
SHARE

newsics.com

ತುಮಕೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್‌ ಪ್ರತಾಪ್‌ ನೀರಿನೊಳಗೆ ರಾಸಾಯನಿಕ ಹಾಕಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿ, ಆ ದೃಶ್ಯವನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿದ್ದಾರೆ.

ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರತಾಪ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 288 ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿ, ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಕೋರ್ಟ್ ಮೂರು ದಿನ ಪೊಲೀಸ್ ವಶಕ್ಕೆ ನೀಡಿದೆ.

ವಿಚಾರಣೆ ವೇಳೆ ಡ್ರೋನ್ ಪ್ರತಾಪ್ ಹಲವು ಸಂಗತಿಗಳನ್ನು ಬಾಯಿಬಿಟ್ಟಿದ್ದಾರೆ. ಇದಕ್ಕೂ ‌ಮುನ್ನ ಎರಡು ಬಾರಿ ಇದೇ ರೀತಿಯ ಸ್ಫೋಟಿಸಿದ್ದೆ. ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದೆ. ಯೂಟ್ಯೂಬ್ನಿಂದ 100 ಡಾಲರ್ ಬಂದಿತ್ತು. ಹೀಗಾಗಿ, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದೆ. ಸ್ಫೋಟದ ವಿಡಿಯೊವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದೆ. ಇದರಿಂದ ಬರುವ ಹಣವನ್ನು ಸಮಾಜ ಕಾರ್ಯಕ್ಕೆ ಉಪಯೋಗಿಸಲು ನಿರ್ಧರಿಸಿದ್ದೇನೆ ಎಂದು ಪ್ರತಾಪ್ ಬಾಯಿಬಿಟ್ಟಿದ್ದಾರೆ.

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುತ್ತದೆ ಎಂದು ನನಗೆ ಅರಿವಿರಲಿಲ್ಲ. ಸ್ಫೋಟವಾದ ಬಳಿಕ ನನಗೆ ಅರಿವು ಆಗಿದೆ ಎಂದು ಪೊಲೀಸರ ಮುಂದೆ ಹೇಳಿದ್ದಾರೆ.

ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಜಿಲ್ಲೆಯ ಮಧುಗಿರಿ ತಾಲೂಕು ಜನಕಲೋಟಿ ಗ್ರಾಮದ ಬಳಿ 40 ಎಕರೆ ಜಮೀನು ಹೊಂದಿದ್ದಾರೆ. ಇವರು, ತಮ್ಮ ಜಮೀನಿನ 10 ಗುಂಟೆ ಜಾಗದಲ್ಲಿ 10X10 ಕಾಟೇಜ್ ನಿರ್ಮಾಣ ಮಾಡಿ ಮಾರಾಟ ಮಾಡಲು ನಿರ್ಧರಿಸಿದ್ದರು. ಇದರ ಜಾಹೀರಾತಿಗಾಗಿ ಡ್ರೋನ್ ಪ್ರತಾಪ್‌ರನ್ನು ಮಾಲೀಕ ಜಮೀನಿಗೆ ಕರೆಸಿದ್ದರು.

ಮೊದಲನೇ ಬಾರಿಗೆ ಶ್ರೀರಾಯರ ಬೃಂದಾವನ ಫಾರ್ಮ್ ಹೌಸ್ ಜಮೀನಿಗೆ ಬಂದ ಡ್ರೋನ್ ಪ್ರತಾಪ್ ಅಲ್ಲಿರುವ ಕೃಷಿ ಹೊಂಡವನ್ನು ವೀಕ್ಷಿಸಿ ತೆರಳಿದ್ದಾರೆ. ಬಳಿಕ ಡ್ರೋನ್ ಪ್ರತಾಪ್ ಸೋಡಿಯಂ, ವಿಡಿಯೋ ಚಿತ್ರಕರಣಕ್ಕೆ ಬೇಕಾದ ಸಾಮಗ್ರಿಗಳಸಹಿತ ಕಾರಿನಲ್ಲಿ ಜಮೀನಿಗೆ ಮತ್ತೊಮ್ಮೆ ಬಂದಿದ್ದಾರೆ. ಈ ವೇಳೆ ಜಮೀನು ಮಾಲೀಕ ಸ್ಥಳದಲ್ಲಿ ಇರಲಿಲ್ಲ.

ಜಮೀನು ಮಾಲೀಕನಿಗೆ ತಾನು ಸೋಡಿಯಂನಿಂದ ಸ್ಫೋಟಿಸುತ್ತಿರುವ ವಿಚಾರ ತಿಳಿಸದೆ, ಪ್ಲಾಸ್ಟಿಕ್ ಕವರ್‌ನಲ್ಲಿ ಸೋಡಿಯಂ ಉಂಡೆಯನ್ನು ಹಾಕಿ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಎಸೆದಿದ್ದಾರೆ. ಆಗ, ದೊಡ್ಡ ಪ್ರಮಾಣದ ಸದ್ದಿನೊಂದಿಗೆ ಸೋಡಿಯಂ ಸ್ಫೋಟಗೊಂಡಿದೆ. ಇದರಿಂದ ಅಕ್ಕ-ಪಕ್ಕದ ತೋಟದಲ್ಲಿದ್ದ ಜನರು ಮತ್ತು ಮನೆಯವರು ಗಾಬರಿಗೊಂಡಿದ್ದರು.

ಸೋಡಿಯಂ ಸ್ಫೋಟದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೊವನ್ನು ನೋಡಿದ ಪೊಲೀಸರು ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಪೊಲೀಸರು ತನಿಖೆ ನಡೆಸಿದಾಗ, 15 ದಿನಗಳ ಹಿಂದೆ ಸ್ಫೋಟಗೊಳಿಸಿರುವ ಬಗ್ಗೆ ತಿಳಿದುಬಂದಿದೆ.

ಡ್ರೋನ್ ಪ್ರತಾಪ್ ಯೂಟ್ಯೂಬ್‌ನಲ್ಲಿ ಹಣ ಸಂಪಾದಿಸಲು ಎರಡು ಬಾರಿ ಸ್ಫೋಟ ನಡೆಸಿದ್ದಾರೆ. ಸ್ಫೋಟಕ್ಕೆ ಜಮೀನು ಮಾಲೀಕರ ಅನುಮತಿ ಇರಲಿಲ್ಲ ಮತ್ತು ಯಾವುದೇ ಅಧಿಕೃತ ಅನುಮತಿಯನ್ನು ಪಡೆಯದೆ ಸ್ಫೋಟ ನಡೆಸಲಾಗಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!

Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ

Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ

TAGGED:Drone Pratap to earn money in the name of social service?
Share This Article
Facebook Twitter Copy Link Print
Previous Article Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!
Next Article Reels whim ರೀಲ್ಸ್ ಹುಚ್ಚಾಟ, ರೈಲಿನ ಬಾಗಿಲಿಗೆ ನೇತಾಡಿದ ಯುವತಿಗೇನಾಯ್ತು? ವೈರಲ್ ವಿಡಿಯೋ ನೋಡಿ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?