newsics.com
ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡುವ ದೃಷ್ಟಿಯಿಂದ ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಅಭಿವೃದ್ಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮುಂದಾಗಿದ್ದಾರೆ.
ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಎಂ. ಬಿ. ಪಾಟೀಲ್ ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ. ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಸಚಿವರ ದೂರದೃಷ್ಟಿಯಾಗಿದೆ.
ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀಟರ್ ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ” ಎನ್ನುವುದು ಅವರ ಮುಂದಾಲೋಚನೆ ಆಗಿದೆ.
ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದೆ. ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ. ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಆ್ಯಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು ಎಂದು ಎಂ.ಬಿ. ಪಾಟೀಲ್ ಹೇಳಿದ್ದಾರೆ.
Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ
ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಏರ್ಪೋರ್ಟ್ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
Women like being alone ರೊಮ್ಯಾನ್ಸ್ ಟೈಮ್… ಒಂಟಿತನದಲ್ಲೇ ಮಹಿಳೆಯರು ಪುರುಷರಿಗಿಂತ ಹೆಚ್ಚು ತೃಪ್ತಿ ಕಾಣುತ್ತಾರಂತೆ!