newsics.com
ಮಂಡ್ಯ: ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಅವರ ಅಸ್ಥಿಯನ್ನು ಎಸ್ ಎಂ ಕೃಷ್ಣ ಮೊಮ್ಮಗ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ಅಮರ್ತ್ಯ ಹೆಗ್ಡೆ ಅವರು ಕಾವೇರಿ ನದಿಯಲ್ಲಿ ವಿಸರ್ಜಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದರು.
ಕಳೆದ ಡಿಸೆಂಬರ್ 10 ರಂದು ತಡರಾತ್ರಿ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರ ಸ್ವಗೃಹದಲ್ಲಿ ತೀವ್ರ ಹೃದಯಘಾತದಿಂದ ಸಾವನ್ನಪ್ಪಿದ್ದರು.
ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ಪಕ್ಷದ ನಾಯಕರು ತೀವ್ರ ಸಂತಾಪ ಸೂಚಿಸಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೂ ಎಸ್‌ಎಂ ಕೃಷ್ಣ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದರು.