newsics.com
ಮುಂಬೈ : ನಟ ಸೋನು ಸೂದ್ ತಮ್ಮ ಹೊಸ ಸಿನಿಮಾದಿಂದ ಬರುವ ಬಾಕ್ಸ್ ಆಫೀಸ್ ಕಲೆಕ್ಷನ್ ಮೊತ್ತವನ್ನು ವೃದ್ಧಾಶ್ರಮ ಮತ್ತು ಅನಾಥಾಶ್ರಮಕ್ಕೆ ನೀಡುವುದಾಗಿ ಅವರು ಹೇಳಿದ್ದಾರೆ.
‘ಫತೇಹ್’ ಸಿನಿಮಾಗೆ ಸ್ವತಃ ಸೋನು ಸೂದ್ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಸೈಬರ್ ಕ್ರೈಂ ಕುರಿತಾದ ಕಹಾನಿ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಮೂಲಕ ಜನರಿಗೆ ಸೈಬರ್ ಸುರಕ್ಷತೆ ಬಗ್ಗೆ ಸಂದೇಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೊವಿಡ್ ಸಂದರ್ಭದಲ್ಲಿ ನಡೆದ ಸೈಬರ್ ವಂಚನೆಗಳನ್ನು ಆಧರಿಸಿ ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ
ಜನವರಿ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸೋನು ಸೂದ್ ಅವರ ಪತ್ನಿ ಸೊನಾಲಿ ಸೂದ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ‘ದೇಶದ ಜನರಿಗಾಗಿ ನಾವು ಈ ಸಿನಿಮಾವನ್ನು ಮಾಡಿದ್ದೇವೆ. ಈ ಚಿತ್ರದ ಕಲೆಕ್ಷನ್ ಹಣವನ್ನು ನಾವು ವೃದ್ಧಾಶ್ರಮ ಮತ್ತು ಅನಾಥಾಶ್ರಮಕ್ಕೆ ಕಳಿಸಿ ಕೊಡಲು ಪ್ರಯತ್ನಿಸುತ್ತೇವೆ’ ಎಂದು ಸೋನು ಸೂದ್ ಹೇಳಿದ್ದಾರೆ.