newsics.com
15 ವರ್ಷಗಳ ಡೇಟಿಂಗ್ ನಂತರ, ನಟಿ ಕೀರ್ತಿ ಸುರೇಶ್ ಮತ್ತು ಆಂಟೋನಿ ಥಟ್ಟಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಡಿ.12ರಂದು ಹಿಂದು ಸಂಪ್ರದಾಯದಂತೆ ಮದುವೆಯಾಗಿದ್ದರು.
ಇದೀಗ ಕ್ರಿಶ್ಚಿಯನ್ ಪದ್ಧತಿಯಂತೆ ಕೀರ್ತಿ ಮತ್ತು ಆಂಟೋನಿ ವಿವಾಹ ಮಾಡಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಕೀರ್ತಿ, ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಅದರಲ್ಲೂ ಕೀರ್ತಿ ಅವರು ಆಂಟೋನಿಗೆ ಲಿಪ್‌ಲಾಕ್ ಮಾಡುತ್ತಿರುವ ಫೋಟೋ ಎಲ್ಲರ ಗಮನ ಸೆಳೆದಿದೆ.ಇಬ್ಬರು ಉಂಗುರ ಬದಲಾಯಿಸಿಕೊಳ್ಳುವ ಹಾಗೂ ನೃತ್ಯ ಮಾಡುವ ದೃಶ್ಯಗಳು ವಿಶೇಷವಾಗಿ ಆಕರ್ಷಕವಾಗಿವೆ. ಇವುಗಳನ್ನು ನೋಡಿದ ನೆಟ್ಟಿಗರು ಹಾಗೂ ಅಭಿಮಾನಿಗಳು ಮತ್ತೊಮ್ಮೆ ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಇನ್ನು ಹಿಂದು ಸಂಪ್ರದಾಯದಂತೆ ಪ್ರವಾಸಿಗರ ಸ್ವರ್ಗ ಗೋವಾದಲ್ಲಿ ಮದುವೆ ನಡೆದಿತ್ತು, ಅಲ್ಲದೇ, ಅದ್ದೂರಿ ವಿವಾಹ ಸಮಾರಂಭದಲ್ಲಿ ಆಪ್ತರು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು.