newsics.com
ರಾಯಚೂರು: ಲಾರಿ ಉರುಳಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಮೂವರು ಲೋಕೋಪಯೋಗಿ ಇಲಾಖೆ ನೌಕರರು ಮೃತಪಟ್ಟ ಘಟನೆ ರಾಯಚೂರಿನ ಸಿಂಧನೂರು ಬಳಿ ಸೋಮವಾರ ರಾತ್ರಿಠಃ ನಡೆದಿದೆ.
ಸಿಂಧನೂರು ಸಮೀಪದ ಡಾಲರ್ಸ್ ಕಾಲೋನಿ ಬಳಿ ಈ ಘಟನೆ ನಡೆದಿದ್ದು, ರಸ್ತೆ ಬದಿ ನಿಂತಿದ್ದ ಅಧಿಕಾರಿಗಳ ಮೇಲೆ ಲಾರಿ ಪಲ್ಟಿಯಾಗಿದೆ.
ಲೋಕೋಪಯೋಗಿ ಇಲಾಖೆಯ ಮಲ್ಲಿಕಾರ್ಜುನ, ಶಿವರಾಜು, ಮೆಹಬೂಬ ಎಂಬುವರು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಮೂವರು ಕೆನಲ್ ಡ್ಯೂಟಿ ಮುಗಿಸಿಕೊಂಡು ಮನೆಗೆ ಹೊರಟಿದ್ದರು. ದಾರಿಯಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಅದೇ ದಾರಿಯಲ್ಲಿ ಬಂದ ಹೊಟ್ಟು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಕೆಳಗೆ ಸಿಲುಕಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಲಾರಿ ಚಾಲಕನನ್ನು ಸಿಂಧನೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Snehamayi Krishna: ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
Mangalamukhi became university professor ಕರ್ನಾಟಕದಲ್ಲಿ ಮೊದಲ ಬಾರಿಗೆ ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ