newsics.com
ಬೆಂಗಳೂರು : ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನೆರಯ ಆಂಧ್ರ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಕೂಡ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಡಿಸೆಂಬರ್ 18, 19 ಹಾಗೂ 20ರಂದು ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ಯಾನಂ ಮತ್ತು ರಾಯಲಸೀಮಾ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ.
ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀವರೆಗೆ ಚಂಡಮಾರುತ ಪರಿಚಲನೆ ವಿಸ್ತರಿಸಿರುವುದು ದೃಢವಾಗಿದೆ. ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯ ಕಡೆಗೆ ವಾಯವ್ಯವಾಗಿ ಚಲಿಸುವ ಸಾಧ್ಯತೆಯಿದೆ.