newsics.com
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿದ್ದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಸಿ.ಟಿ. ರವಿ ಎಲ್ಲಿದ್ದಾರೋ ಅಲ್ಲಿಯೇ ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಉಮಾ ಅವರು ಆದೇಶ ನೀಡಿದ್ದರಿಂದ ರವಿ ಅವರನ್ನು ಶುಕ್ರವಾರ ಸಂಜೆ ದಾವಣಗೆರೆಯಲ್ಲಿ ಬಿಡುಗಡೆ ಮಾಡಲಾಯಿತು.
ಸಿ ಟಿ ರವಿ ಅವರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್, ಕೂಡಲೇ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಸಿ.ಟಿ. ರವಿ ಅವರ ಪರವಾಗಿ ವಾದ ಮಂಡಿಸಿದ ವಕೀಲರು, ಆರೋಪಿಗಳಿಗೆ 7 ವರ್ಷಕ್ಕಿಂದ ಕಡಿಮೆ ಶಿಕ್ಷೆ ಇರುವ ಪ್ರಕರಣದಲ್ಲಿ 41a ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆ ಕಾರಣ ನೀಡಬೇಕಿತ್ತು. ಆದರೆ, ಅದನ್ನು ನೀಡಿರುವ ಬಗ್ಗೆ ದಾಖಲೆಗಳು ಇಲ್ಲ. ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯ ಆಗಿದೆ ಎಂದು ಸಿಟಿ ರವಿ ವಕೀಲರು ಹೇಳಿದ್ದಾರೆ. ಸಿ.ಟಿ. ರವಿ ಅವರಿಗೆ ಚಿಕಿತ್ಸೆ ನೀಡಿದ ವಿವರವನ್ನು ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಕೇವಲ ಸ್ಕ್ಯಾನಿಂಗ್ ಮಾಡಿಸಿರುವ ಬಗ್ಗೆ ವರದಿ ಇದೆ ಎಂದು ಕೋರ್ಟ್ ಮುಂದೆ ತಿಳಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಷತ್ ಸಭಾಂಗಣದಲ್ಲಿ ನಡೆದ ಏನನ್ನೂ ರೆಕಾರ್ಡ್ ಮಾಡಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ನಡೆದಿರುವುದು ದುರದೃಷ್ಟಕರ. ಆರೋಪಿ ರವಿ ಬಂಧಿಸಲು ಹಲ್ಲೆ ಮಾಡುವ ಅಗತ್ಯ ಇರಲಿಲ್ಲ. ಕಾನೂನು ಪಾಲಿಸಿ ಕ್ರಮ ಕೈಗೊಳ್ಳಬಹುದಿತ್ತು ಎಂದು ವಾದ ಮಂಡಿಸಿದರು.
ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠದಿಂದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. ಪೊಲೀಸರ ತನಿಖೆಗೆ ಸಹಕರಿಸಬೇಕೆಂದು ರವಿ ಅವರಿಗೆ ಷರತ್ತು ವಿಧಿಸಲಾಗಿದೆ.
https://twitter.com/i/status/1869933633303134328
C T Ravi ಸಿ.ಟಿ ರವಿ ಬಂಧನ ಖಂಡಿಸಿ BJP ಪ್ರತಿಭಟನೆ: ಸಿಎನ್ ಅಶ್ವತ್ಥ್ ನಾರಾಯಣ್ ಸೇರಿ ಹಲವರು ಅರೆಸ್ಟ್