newsics.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್ ಸಿಕ್ಕ ಹಿನ್ನೆಲೆ ವಿಜಯಲಕ್ಷ್ಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ದರ್ಶನ್‌ಗೆ ಜಾಮೀನು ಸಿಕ್ಕ ಹಿನ್ನೆಲೆ ಕುಟುಂಬದೊಂದಿಗೆ ವಿಜಯಲಕ್ಷ್ಮಿ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ. ದರ್ಶನ್ ಹೊರತುಪಡಿಸಿ ಕುಟುಂಬ ಸಮೇತವಾಗಿ ತೆರಳಿದ್ದಾರೆ.
ದಿನಕರ್, ಮೀನಾ ತೂಗುದೀಪ, ವಿಜಯಲಕ್ಷ್ಮಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸದ್ಯ ನಟ ಅವರ ಮೈಸೂರಿನ ತೋಟದಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.