newsics.com
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಂಬಂಧ MLC ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ”ಭಾರತದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆಯು ನಾಗರಿಕತೆಯನ್ನ ಹೇಳುತ್ತದೆ. ಜನಪ್ರತಿನಿಧಿಗಳಾದವರು ಸದನದ ಗೌರವ, ಘನತೆ ಕಾಪಾಡಬೇಕು”. ಸಿ.ಟಿ.ರವಿ ಅವರು ಅಸಾಂವಿಧಾನಿಕ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ. ಹೀಗಾಗಿ ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.