newsics.com
ನವದೆಹಲಿ: ಶೀಘ್ರವೇ ದೆಹಲಿ ಸಿಎಂ ‘ಅತಿಶಿ’ ಬಂಧನವಾಗಲಿದೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್ ಹೇಳಿಕೆ ಸಂಚಲನ ಮೂಡಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಅತಿಶಿ ಅವರ ಬಂಧನಕ್ಕೂ ಮೊದಲು ಎಎಪಿಯ ಹಿರಿಯ ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.
ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಯಂತಹ ಕಲ್ಯಾಣ ಯೋಜನೆಗಳನ್ನು ಕಂಡು ಕೆಲವರು ನಲುಗಿ ಹೋಗಿದ್ದಾರೆ. ಹೀಗಾಗಿ ಇಂತಹ ಕೆಲಸಕ್ಕೆ ಕೈಹಾಕಬಹುದು’ ಎಂದು ತಿಳಿಸಿದ್ದಾರೆ.
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿಯು, ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ.
ಮಹಿಳಾ ಸಮ್ಮಾನ್ ಯೋಜನೆಯಡಿ ಅರ್ಹ ಮಹಿಳೆಯರು ಮಾಸಿಕ ₹1 ಸಾವಿರ ಪಡೆಯುತ್ತಿದ್ದು, ಎಎಪಿ ಮತ್ತೆ ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು ₹2,100ಕ್ಕೆ ಹೆಚ್ಚಿಸುವುದಾಗಿ ಭರವಸೆ ನೀಡಿದೆ.
ಸಂಜೀವಿನಿ ಯೋಜನೆಯಡಿ 60 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ನೀಡುವ ಭರವಸೆ ನೀಡಿದೆ