newsics.com
ಹಾವೇರಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿಯ ಶಿಗ್ಗಾವಿ ತಾಲೂಕಿನಲ್ಲಿ ನಡೆದಿದೆ.
ಶಿಗ್ಗಾವಿಯ ತಡಸ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ.
ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.