newsics.com
ಕೋಲಾರ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ.
ಕೆಜಿಎಫ್’ನ ಕಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾವು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬೆಮೆಲ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮೃತ ಮಹಿಳೆಯ ಗಂಡ ಮಣಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.