ಮನಮೋಹನ್ ಸಿಂಗ್ ನಿಧನ ಹಿನ್ನೆಲೆ: ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ

newsics.com ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ಶುಕ್ರವಾರ (ಡಿ.27) ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ನಾಳೆ ಎಲ್ಲ ಶಾಲಾ ಕಾಲೇಜುಗಳಲ್ಲದೆ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಅಲ್ಲದೆ, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.