newsics.com
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ಅಧಿಕೃತ ಮಾಹಿತಿಯನ್ನು ಇಂದು (ಶುಕ್ರವಾರ) ತಿಳಿಸಲಾಗುವುದು ಎಂದಿದ್ದಾರೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.