newsics.com
ಮಂಡ್ಯ : ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪ್ರಿಯತಮೆಗಾಗಿ ಜೈಲಿಗೆ ಹೋಗಿ ಬಂದಿದ್ದ. ಪ್ರೇಯಸಿ ಸಂಪರ್ಕಕ್ಕೆ ಸಿಗದಿದ್ದರಿಂದ ಮನನೊಂದು ಜೀವ ಕಳೆದುಕೊಂಡಿದ್ದಾನೆ.
ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ.
ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾನೆ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿಕೊಂಡಿದ್ದರು .