newsics.com
ಶಿರಸಿ: ಬಸ್ ಹಾಗೂ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸಾವನ್ನಪ್ಪಿದ ಧಾರುಣ ಘಟನೆ ತಾಲ್ಲೂಕಿನ ಬನವಾಸಿಯ ಕಪಗೇರಿ ಬಳಿ ನಡೆದಿದೆ.
ರಾಜಸ್ಥಾನ ಮೂಲದ ಬನವಾಸಿ ನಿವಾಸಿ ಜಬ್ಬಾರ್ ಸಿಂಗ್ ಮೃತ ಕಾರು ಚಾಲಕನಾಗಿದ್ದಾನೆ. ಬನವಾಸಿಯಿಂದ ಸೊರಬ ರಸ್ತೆ ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಬನವಾಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಶವಾಗಾರಕ್ಕೆ ರವಾನಿಸಿದ್ದಾರೆ. ಅಪಘಾತಕ್ಕೊಳಗಾದ ಕಾರನ್ನು ಪಕ್ಕಕ್ಕೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.