newsics.com
ಬೆಂಗಳೂರು: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಬೆಂಗಳೂರು ಸಮೀಪದಲ್ಲಿರುವ ಪ್ರವಾಸಿ ತಾಣವಾದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ನಾಳೆ (ಡಿಸೆಂಬರ್ 31) ಸಂಜೆ 6ರಿಂದ ನಾಡಿದ್ದು (ಜನವರಿ 1) ಬೆಳಗ್ಗೆ 7ರವರೆಗೆ ನಿರ್ಬಂಧ ವಿಧಿಸಲಾಗಿದೆ. ನಂದಿ ಬೆಟ್ಟದ ಸುತ್ತ 150ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರ ನಿಷೇಧ ಹೇರಿದೆ. ಹೊಸ ವರ್ಷದಂದು ರಾತ್ರಿ ಸಮಯದಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸಿದೆ.
ಹೋಂ ಸ್ಟೇ ರೆಸಾರ್ಟ್ಗಳಲ್ಲಿ ನಿಗದಿತ ಜನ ಮಾತ್ರ ಇರಬೇಕು. ಹೆಚ್ಚು ಜನ ಸೇರಿಕೊಂಡು ಪಾರ್ಟಿ ಮಾಡುವಂತಿಲ್ಲ, ಡಿಜೆ ಬ್ಯಾನ್ ಮಾಡಲಾಗಿದೆ. ಧ್ವನಿವರ್ಧಕಗಳನ್ನು 10 ಗಂಟೆಯವರೆಗೂ ಮಾತ್ರ ಬಳಸಬೇಕು. ಬೈಕ್ ವ್ಹಿಲಿಂಗ್ ಹಾಗೂ ರ್ಯಾಷ್ ಡ್ರೈವಿಂಗ್ ಮಾಡುವವರ ಮೇಲೂ ಹದ್ದಿನ ಕಣ್ಣು ಇಡಲಾಗುವುದು. ಹೊಸ ವರ್ಷದಂದು ಟ್ರಾಫಿಕ್ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.
ಕಾವೇರಿ ನದಿ ತೀರ, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ನಾಳೆ ರಾತ್ರಿ 1 ಗಂಟೆವರೆಗೂ ಪಬ್, ಬಾರ್ ಓಪನ್‌ಗೆ ಅವಕಾಶ ನೀಡಲಾಗಿದೆ.