Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Infosys Campus ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ: ಮನೆಯಿಂದಲೇ ಕೆಲಸ ಮಾಡಲು ಸೂಚನೆ
ಕರ್ನಾಟಕಪ್ರಮುಖ

Infosys Campus ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ: ಮನೆಯಿಂದಲೇ ಕೆಲಸ ಮಾಡಲು ಸೂಚನೆ

Share
2 Min Read
SHARE

newsics.com

ಮೈಸೂರು: ಇಲ್ಲಿನ ಇನ್ಫೋಸಿಸ್ ಡಿಸಿ ಕ್ಯಾಂಪಸ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ನಿರ್ಮಾಣವಾಗಿದೆ. ಕಂಪನಿ ಆಡಳಿತ ಮಂಡಳಿ, ಉದ್ಯೋಗಿಗಳು ಆತಂಕದಲ್ಲಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಕಂಪನಿಯು ಮಂಗಳವಾರ (ಡಿಸೆಂಬರ್ 31) ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್ ಸುತ್ತಮುತ್ತ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಟಾಸ್ಕ್‌ ಫೋರ್ಸ್ ಕ್ಯಾಂಪಸ್ ಸುರಕ್ಷತೆಯನ್ನು ಪರಿಶೀಲಿಸಲಾಗುತ್ತಿದೆ. ಚಿರತೆಯ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಇನ್ಫೋಸಿಸ್ ಕಂಪನಿ ಮಾನವ ಸಂಪನ್ಮೂಲ ವಿಭಾಗದ ಸದಸ್ಯರು ಉದ್ಯೋಗಿಗಳು ತಿಳಿಸಿದ್ದಾರೆ.

ಯಾರೂ ಸಹ ಕ್ಯಾಂಪಸ್‌ಗೆ ಬಾರದಂತೆ ನೋಡಿಕೊಳ್ಳಲು ಟೀಂ ಲೀಡ್‌ಗೆ ಮಾಹಿತಿ ರವಾನಿಸಲಾಗಿದೆ. ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ಸಂಬಂಧ ಅರಣ್ಯ ಇಲಾಖೆ ಸಹಕಾರದಲ್ಲಿ ಚಿರತೆ ಪತ್ತೆಗೆ ಶೋಧ ನಡೆಯುತ್ತಿದ್ದು, ಕ್ಯಾಂಪಸ್ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಮಾನವ ಸಂಪನ್ಮೂಲ ವಿಭಾಗ ತಿಳಿಸಿದೆ.

ಮೈಸೂರಿನಲ್ಲಿರುವ ಇನ್ಫೋಸಿಸ್ ಕ್ಯಾಂಪಸ್ ಬರೋಬ್ಬರಿ 150 ಎಕರೆ ಪ್ರದೇಶದಲ್ಲಿದೆ. ಎಲ್ಲ ಕಡೆಗೂ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಚಿರತೆ ಪತ್ತೆಗೆ ಹಾಗೂ ಸೆರೆ ಹಿಡಿಯಲು ವಿಶೇಷ ಕಾರ್ಯಪಡೆ ನಿಯೋಜಿಸಿದ್ದಾರೆ. ತ್ವರಿತವಾಗಿ ಸುರಕ್ಷತೆ ಒದಗಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಅಲರ್ಟ್ ಆಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಉಪಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಐಬಿ ಪ್ರಭುಗೌಡ ಅವರು, ಮಂಗಳವಾರ ಬೆಳ್ಳಂಬೆಳಗ್ಗೆ 2 ಗಂಟೆ ಸುಮಾರಿಗೆ ಚಿರತೆ ಓಡಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಬಳಿಕ ಸುಮಾರು ಬೆಳಗ್ಗೆ 4 ಗಂಟೆಗೆ ಹೊತ್ತಿಗೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಚಿರತೆ ಪತ್ತೆಗೆ ಶೋಧ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಸಾಫ್ಟವೇರ್ ಬಹುದೊಡ್ಡ ಕಂಪನಿಗಳ ಆವರಣದಲ್ಲಿ ಚಿರತೆ ಕಾಣುವುದು, ಕ್ಯಾಂಪಸ್ ಒಳಕ್ಕೆ ಬಂದು ಹೋಗುವುದು ಇದೇ ಮೊದಲೇನಲ್ಲ. 2011ರಲ್ಲೂ ಇದೇ ಕ್ಯಾಂಪಸ್‌ನಲ್ಲಿ ಚಿರತೆ ಕಾಣಸಿಕೊಂಡಿತ್ತು ಎನ್ನಲಾಗಿದೆ.

ಇನ್ಫೋಸಿಸ್ ಕ್ಯಾಂಪಸ್ ಮೀಸಲು ಅರಣ್ಯ ಪ್ರದೇಶಕ್ಕೆ ಹತ್ತಿರದಲ್ಲಿದೆ. ಈ ಅರಣ್ಯದ ಭಾಗವು ಹಿಂದಿನಿಂದಲೇ ಚಿರತೆ ವಾಸದ ತಾಣವಾಗಿದೆ. ಹೀಗಾಗಿ ಆಗಾಗ ಕ್ಯಾಂಪಸ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಚಿರತೆಗಳು ಕಾಣುತ್ತಿವೆ. ಆಹಾರ ಅರಸಿ ಬಂದು ದಾರಿ ತಪ್ಪಿ ಕ್ಯಾಂಪಸ್ ಒಳಗೆ ಬಂದಿರುವ ಶಂಕೆ ಇದೆ. ಕೂಡಲೇ ಎಲ್ಲ ಸಿಸಿಟಿವಿ ಪರಿಶೀಲಿಸಿ ಸುರಕ್ಷತೆಯನ್ನು ಖಚಿತಪಡಿಸಲಾಗುವುದು ಎಂದು ಅರಣ್ಯಧಿಕಾರಿಗಳು ಹೇಳಿದ್ದಾರೆ.

ಮೈಸೂರಿನ ಇನ್ಫೋಸಿಸ್ ಗ್ಲೋಬಲ್ ಎಜುಕೇಶನ್ ಸೆಂಟರ್‌ನಲ್ಲಿರುವ ಸುಮಾರು 4,000 ಪ್ರಶಿಕ್ಷಣಾರ್ಥಿಗಳಿಗೆ ಮಂಗಳವಾರ ಮನೆಯೊಳಗೇ ಇರುವಂತೆ ತಿಳಿಸಲಾಗಿದೆ. ಅವರಿಗೆ ರಜೆ ನೀಡಲಾಗಿದೆ.

TAGGED:Cheetah on Infosys Campus: Tips for working from home
Share This Article
Facebook Twitter Copy Link Print
Previous Article wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?
Next Article ಬಾಯ್ ಫ್ರೆಂಡ್ ಜತೆ ಮಾತಾಡಲು ತಾಯಿಗೆ 3 ತಿಂಗಳಿಂದ ನಿದ್ರೆ ಮಾತ್ರೆ ಕೊಡುತ್ತಿದ್ದ ಅಪ್ರಾಪ್ತ ಮಗಳು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?