newsics.com
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.
ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಅಗ್ನಿ ದುರಂತದ 9 ಮಾಲಾಧಾರಿಗಳು ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಒಬ್ಬರ ಬೆನ್ನಿಗೊಬ್ಬರಂತೆ ಮೃತಪಟ್ಟಿದ್ದಾರೆ.
ಶಾಸಕ ಮಹೇಶ್ ಟೆಂಗಿನಕಾಯಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಸರ್ಕಾರ ಪರಿಹಾರದ ಮೊತ್ತವನ್ನ 15 ಲಕ್ಷಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜತೆಗೂ ಪರಿಹಾರದ ಬಗ್ಗೆ ಮಾತನಾಡುವುದಾಗಿ ತಿಳಿಸಿದ್ದರು.