Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ
ಕರ್ನಾಟಕದೇಶಪ್ರಮುಖಮನರಂಜನೆ

Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ

Share
2 Min Read
SHARE

newsics.com

ಬೆಂಗಳೂರು: ಸಂಗೀತ ವಿದ್ವಾಂಸ, ಬಹುವಾದ್ಯ ಪರಿಣತ ಎಸ್. ಬಾಲಿ ಖ್ಯಾತಿಯ ಎಸ್ ಬಾಲಸುಬ್ರಹ್ಮಣ್ಯಂ ಅವರು ಗುರುವಾರ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಎಸ್ ಬಾಲಿ ಅವರು ಮೃದಂಗ, ತಬಲಾ, ಢೋಲಕ್‌ , ಢೋಲ್ಕಿ, ಖಂಜರಿ, ಕೋಲ್‌ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸರಾಗಿದ್ದರು.

ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್‌ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್‌, ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್‌, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.

ತಂದೆ ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದ್ದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಬೆಳೆಸಿಕೊಂಡ ಬಾಲಿ ಪಾಲಕ್ಕಾಡು ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಭಾಗಿಯಾಗಿದ್ದಾರೆ.

ಬಾಲಿಯವರು ಶಾಸ್ತ್ರೀಯವಾಗಿ ಕಲಿತದ್ದು ಮೃದಂಗ ಮಾತ್ರ. ಆದರೆ ತಮ್ಮ ಶ್ರದ್ಧೆಯಲ್ಲೇ ತಬಲ, ಢೋಲಕ್, ಢೋಲ್ಕಿ, ಖೋಲ್, ಖಂಜಿರ ಮುಂತಾದ ಹಲವಾರು ವಾದ್ಯಗಳನ್ನು ನುಡಿಸುವ ಪರಿಣತಿಯನ್ನು ಸಾಧಿಸಿದ್ದರು. ಹೀಗೆ ಸಕಲ ಲಯ ವಾದ್ಯಗಳ ನುಡಿಸುವಿಕೆಯಲ್ಲಿ ಪರಿಣತಿ ಪಡೆದ ಅಪರೂಪದ ಲಯವಾದ್ಯಗಾರ ಬಾಲಿ ಇನ್ನು ನೆನಪು ಮಾತ್ರ.

ಹೆಸರಾಂತ ಗಾಯಕರುಗಳಾದ ಬಾಳಪ್ಪ ಹುಕ್ಕೇರಿ, ಕಾಳಿಂಗರಾವ್, ಮೈಸೂರು ಅನಂತಸ್ವಾಮಿ, ಶ್ಯಾಮಲಭಾವೆ, ಸಿ ಅಶ್ವತ್ಥ್, ರತ್ನಮಾಲಾ ಪ್ರಕಾಶ್, ಮಾಲತಿ ಶರ್ಮ ಮುಂತಾದವರ ಕಾರ್ಯಕ್ರಮಗಳಲ್ಲಿ ಬಾಲಿ ಸಾಥ್ ನೀಡಿದ್ದಾರೆ.

ಚಲನಚಿತ್ರ, ನೃತ್ಯ, ನಾಟಕ, ಕಿರುತೆರೆ, ಧ್ವನಿಮುದ್ರಣ ಕಾರ್ಯಗಳಲ್ಲಿ ಖ್ಯಾತ ಸಂಗೀತಗಾರರುಗಳಾದ ಜಿ.ಕೆ. ವೆಂಕಟೇಶ್, ವಿಜಯಭಾಸ್ಕರ್, ಎಂ. ರಂಗರಾವ್, ರಾಜನ್-ನಾಗೇಂದ್ರ, ಟಿ.ಜಿ. ಲಿಂಗಪ್ಪ, ಅನಂತಸ್ವಾಮಿ, ಅಶ್ವತ್ಥ್-ವೈದಿ ಮುಂತಾದವರ ಸಂಗೀತ ಸಂಯೋಜನೆಗಳಿಗೆ ಬಾಲಿ ಅವರು ಲಯ ಸಂಯೋಜನೆ ಮಾಡಿದ್ದಾರೆ.‍‍

ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಅವರದ್ದಾಗಿದೆ. ಶಂಕರನಾಗ್‌ ಅವರ ಸಂಕೇತ್‌ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾಗಿದ್ದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದ್ದರು.

ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ ಅಹಮದ್ ಅವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಬಾಲಿ ಭಾಜನರಾಗಿದ್ದಾರೆ.

Bus fare hike ಬಸ್ ಪ್ರಯಾಣ ದರ ಶೇ.15‌ ಹೆಚ್ಚಳಕ್ಕೆ ಸಂಪುಟ ಸಮ್ಮತಿ

Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

TAGGED:Multi-instrumentalist S. Bali of Rhythm King fame is no more
Share This Article
Facebook Twitter Copy Link Print
Previous Article Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
Next Article Fashion Tips ಫಾರ್ಮಲ್ಸ್ ಬಟ್ಟೆಗಳಿಗೆ ಈ ರೀತಿ ಶೂ ಧರಿಸಿ, ಸಖತ್ ಸ್ಟೈಲಿಶ್ ಆಗಿ ಕಾಣ್ತೀರಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?