newsics.com
ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸರ್ಕಾರವು ತೀರ್ಮಾನಿಸಿದೆ.
ಈ ಬಗ್ಗೆ ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಜನವರಿ 5ರಿಂದ ಹೊಸ ದರ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ನಾಲ್ಕು ರಸ್ತೆ ಸಾರಿಗೆ ನಿಗಮಗಳ ಡೀಸೆಲ್ ವೆಚ್ಚ 2015ರಲ್ಲಿ ನಿತ್ಯ 9.14 ಕೋಟಿ ರೂ. ಇತ್ತು, ಈಗ ಅದು 13.21 ಕೋಟಿ ರೂ.ಗೆ ಹೆಚ್ಚಳವಾಗಿದೆ. ಸಿಬ್ಬಂದಿಯ ವೆಚ್ಚ ನಿತ್ಯ 12.85 ಕೋಟಿಯಿಂದ ಪ್ರಸ್ತುತ 18.36 ಕೋಟಿ ರೂ.ಗೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಶೇ.15 ದರ ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ.
Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ
Drinks time ಕಾಫಿ ಕುಡಿಯಲು ಬೆಸ್ಟ್ ಟೈಮ್ ಯಾವ್ದು? ಯಾವಾಗ ಯಾವ ಡ್ರಿಂಕ್ಸ್ ಕುಡಿದ್ರೆ ಒಳ್ಳೇದು?