ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಲ್ಲು ಅರ್ಜುನ್ ಗೆ ಜಾಮೀನು

newsics.com ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ. ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು ದೊರೆತಿದೆ.