newsics.com
ಚಾಮರಾಜನಗರ: ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು- ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಸೋಮವಾರ ಕುಸಿದುಬಿದ್ದು ಮೃತಪಟ್ಟ ವಿದ್ಯಾರ್ಥಿನಿ.
ತೇಜಸ್ವಿನಿ ಸೋಮವಾರ ಎಂದಿನಂತೆ ಶಾಲೆಗೆ ಹೋಗಿದ್ದು, ಕ್ಲಾಸ್ನಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಾಗ ಏಕಾಏಕಿ ಕುಸಿದುಬಿದ್ದು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.
ಕೂಡಲೇ ತೇಜಸ್ವಿನಿಯನ್ನು ಜೆಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದುರದೃಷ್ಟವಶಾತ್ ಅಷ್ಟರಲ್ಲಾಗಲೇ ತೇಜಸ್ವಿನಿ ಮೃತಪಟ್ಟಿದ್ದಳು. ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
ಎರಡು ಪಿರಿಯಡ್ ಆದ ಬಳಿಕ ಶಾರ್ಟ್ ಬ್ರೇಕ್ ಇತ್ತು. ಈ ಸಮಯದಲ್ಲಿ ಕೈಯಲ್ಲಿ ನೋಟ್ ಬುಕ್ ಹಿಡಿದು ತೇಜಸ್ವಿನಿ ಆಚೆ ಬಂದಿದ್ದಾಳೆ. ಈ ವೇಳೆ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚೆಸ್ಟ್ ಮಸಾಜ್ ಇಸಿಜಿ ಮಾಡಿಸಿದ್ದೇವೆ. ಆದರೂ ಪ್ರಯೋಜನವಾಗಲಿಲ್ಲ ಎಂದು ಪ್ರಿನ್ಸಿಪಾಲ್ ತಿಳಿಸಿದ್ದಾರೆ.
ಗುಜರಾತ್‌ನಲ್ಲೂ HMPV ಪತ್ತೆ, 2 ತಿಂಗಳ ಮಗುವಿಗೆ ಸೋಂಕು, ದೇಶದಲ್ಲಿ ಒಂದೇ ದಿನ 3 ಪ್ರಕರಣ ಪತ್ತೆ