newsics.com
ಬೆಂಗಳೂರು: ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿದ್ದ 17 ಮಂದಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ ನಿಶಾನಿ ಪೊಲೀಸರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಡಿಸೆಂಬರ್ 13 ರಂದು ನಟ ದರ್ಶನ್, ಪವಿತ್ರಾ ಸೇರಿದಂತೆ ಏಳು ಆರೋಪಿಗಳು ಜಾಮೀನು ಪಡೆದಿದ್ದರು.
ಚಿನ್ನದ ರೀತಿಯಲ್ಲೇ ಬೆಳ್ಳಿಗೂ ಹಾಲ್‌ಮಾರ್ಕ್ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ: ಸಚಿವ ಪ್ರಹ್ಲಾದ್ ಜೋಶಿ