Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ
ಆರೋಗ್ಯಕರ್ನಾಟಕದೇಶಪ್ರಮುಖ

ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ

Share
2 Min Read
SHARE

newsics.com

ಬೆಂಗಳೂರು: ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 8 ತಿಂಗಳ ಮಗು ಸೇರಿ ಇಬ್ಬರು ಮಕ್ಕಳಲ್ಲಿ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಮಗುವಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ.

ಸೋಮವಾರ ಮಧ್ಯಾಹ್ನ 12:30ಕ್ಕೆ ಸಚಿವರು ಸಭೆ ಕರೆದಿದ್ದು, ವೈರಸ್ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಿದ್ದಾರೆ. ವೈರಸ್ ಬಗ್ಗೆ ಜಾಗೃತಿ ವಹಿಸಲು ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ.

ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ವೇಳೆ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂಪಿವಿ ವೈರಸ್ ಇರುವುದು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ರಾಜ್ಯದಲ್ಲಷ್ಟೇ ಅಲ್ಲ, ದೇಶಾದ್ಯಂತ ಆತಂಕ ಹೆಚ್ಚಿದೆ‌.

ಚೀನಾದಲ್ಲಿ HMPV ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇದು ಕೋವಿಡ್-19 ನಂತಹ ಗಂಭೀರ ಪರಿಸ್ಥಿತಿಗೆ ಕಾರಣವಾಗುತ್ತಿಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೂ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಎಚ್ಚರಿಕೆ ವಹಿಸುವುದು ಮುಖ್ಯವಾಗಿದೆ. ಚೀನಾದಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಮಂದಿ ಈ ಸೋಂಕಿಗೆ ತುತ್ತಾಗಿದ್ದಾರೆ.

ಏ‌ನಿದು ಎಚ್‌ಎ‌ಪಿವಿ?:

2001ರಲ್ಲಿ ಪತ್ತೆಯಾದ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (HMPV), ನ್ಯುಮೊವಿರಿಡೆ ಕುಟುಂಬಕ್ಕೆ ಸೇರಿದ್ದು, ಇದು ಉಸಿರಾಟದ ಸಿನ್ಸಿಟಿಯಲ್ ವೈರಸ್ (RSV) ಅನ್ನು ಸಹ ಒಳಗೊಂಡಿದೆ. 2001ರಲ್ಲಿ ಅಧಿಕೃತವಾಗಿ ಗುರುತಿಸಲ್ಪಟ್ಟಿದ್ದರೂ, HMPV ಮನುಷ್ಯರಲ್ಲಿ 60 ವರ್ಷಗಳಿಂದ ಅಸ್ತಿತ್ವದಲ್ಲಿದೆ ಮತ್ತು ಪ್ರಪಂಚದಾದ್ಯಂತ ಕಂಡುಬರುತ್ತದೆ ಎಂದು ಅಧ್ಯಯನಗಳು ಹೇಳಿವೆ.

ವೈರಸ್ ಎಲ್ಲಾ ವಯಸ್ಸಿನ ವ್ಯಕ್ತಿಗಳಲ್ಲಿ ಉಸಿರಾಟದ ಕಾಯಿಲೆಗಳನ್ನು ಉಂಟುಮಾಡಬಹುದು, ಆದರೂ ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲಗೊಂಡ ರೋಗನಿರೋಧಕ ಶಕ್ತಿ ಹೊಂದಿರುವವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ ಎನ್ನಲಾಗಿದೆ.

ಲಕ್ಷಣಗಳೇನು?:

HMPVಯ ಲಕ್ಷಣಗಳು ಕೆಮ್ಮು, ಜ್ವರ, ಮೂಗಿನ ದಟ್ಟಣೆ ಮತ್ತು ಉಸಿರಾಟದ ತೊಂದರೆ ಸೇರಿದಂತೆ ಇತರ ಉಸಿರಾಟದ ಕಾಯಿಲೆಗಳನ್ನು ಹೋಲುತ್ತವೆ.

ಇತ್ತೀಚಿನ ವರದಿಗಳು ವೈರಸ್ ಹಠಾತ್ ಸಾವುಗಳ ಉಲ್ಬಣಕ್ಕೆ ಸಂಬಂಧಿಸಿದೆ. ವಿಶೇಷವಾಗಿ 40 ರಿಂದ 80 ವರ್ಷ ವಯಸ್ಸಿನ ಜನರಲ್ಲಿ ಕಾಣಿಸಿಕೊಳ್ಳುತ್ತದೆ. ನ್ಯುಮೋನಿಯಾ ಸೋಂಕಿನಿಂದ ಬಳಲುತ್ತಿರುವವರಲ್ಲಿ ವಿಶೇಷವಾಗಿ ಮಕ್ಕಳನ್ನು ಕಾಡಲಿದೆ.

Eye Health: ನಿಮಗೆ ಕಣ್ಣು ಸರಿಯಾಗಿ ಕಾಣ್ತಿಲ್ಲವಾ? ಕಣ್ಣಿನ ದೃಷ್ಟಿ ಚುರುಕಾಗಿರಲು ಈ ಆಹಾರಗಳು ಅತ್ಯಗತ್ಯ…

children angry : ನಿಮ್ಮ ಮಕ್ಕಳು ಕೋಪಗೊಳ್ಳುತ್ತಾರೆಯೇ? ಪೋಷಕರು ಏನು ಮಾಡಬೇಕು ನೋಡಿ

TAGGED:China's new virus HMPV detected in Bangalore tooheavy tensionminister calls emergency meeting
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 06-01-2025, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Bengaluru ಇಬ್ಬರು‌ ಮಕ್ಕಳನ್ನು ಕೊಂದು ತಂದೆ, ತಾಯಿ ಆತ್ಮಹ*ತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?