Cylinder blast ಮನೆಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಚಿಂತಾಜನಕ, ಮನೆ ಛಿದ್ರ ಛಿದ್ರ
newsics.com ಬೆಂಗಳೂರು: ಆನೇಕಲ್‌ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಛಿದ್ರ ಛಿದ್ರವಾಗಿವೆ. ಮನೆಯ ಪಕ್ಕದಲ್ಲಿದ್ದ ಹಲವು ಬೈಕ್‌ಗಳೂ ಜಖಂಗೊಂಡಿವೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಲ್ಲೂ ಚೀನಾದ … Continue reading Cylinder blast ಮನೆಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಚಿಂತಾಜನಕ, ಮನೆ ಛಿದ್ರ ಛಿದ್ರ
Copy and paste this URL into your WordPress site to embed
Copy and paste this code into your site to embed