newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಯಿತು. ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ಜನವರಿ 10 ಕ್ಕೆ ಒಂದು ಮುಂದೂಡಿದರು.
ವಿಚಾರಣೆ ಆರಂಭದ ವೇಳೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪರ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ವಾದ ಮಂಡಿಸಿದರು. ಪೊಲೀಸರು ಕೆಲವು ಸಾಕ್ಷಿಗಳ ಹೇಳಿಕೆಯನ್ನು ಕೋರ್ಟಿಗೆ ಸಲ್ಲಿಸಿಲ್ಲ. ಈ ಹೇಳಿಕೆಗಳು ಆರೋಪ ಪಟ್ಟಿಯ ಭಾಗವಲ್ಲದಿದ್ದರೂ ಕೂಡ ಕೋರ್ಟ್ ತರಿಸಿಕೊಳ್ಳಬಹುದು. ಪೊಲೀಸರ ಕೇಸ್ ಡೈರಿಯ ಕೂಡ ತನಿಖೆಯ ಭಾಗವಾಗಿದೆ ಎಂದು ವಾದಿಸಿದರು. ಈ ವೇಳೆ ವಿಚಾರಣೆ ಜನವರಿ 10 ಕ್ಕೆ ಮುಂದೂಡಿ ಹೈಕೋರ್ಟ ಆದೇಶಿಸಿತು.
ಪ್ರಕರಣದ ಹಿನ್ನೆಲೆ?
ಸಹಾಯ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತಾಯಿ ಮಗಳು ಭೇಟಿ ನೀಡಿದ್ದ ಸಂದರ್ಭದಲ್ಲಿ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾರ್ಚ್ 14, 2024ರಂದು ದೂರು ನೀಡಿದ್ದರು. ಈ ದೂರು ಆಧರಿಸಿ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.