newsics.com
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರುದ್ಧದ ಹೇಳಿಕೆಗೆ ಬೀದರ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳು ನಾಳೆ ಬೀದರ್ ಬಂದ್‌ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಡಿಡಿಪಿಐ ಎಸ್.ಎಲ್. ಪ್ರಸನ್ನ ಕುಮಾರ್ ಅವರು ರಜೆ ಆದೇಶ ಹೊರಡಿಸಿದ್ದಾರೆ.
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ದಲಿತಪರ ಸಂಘಟನೆಗಳಿಂದ ಬೀದರ್ ನಗರ ಬಂದ್‌ಗೆ ಕರೆ ನೀಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಉಪನಿರ್ದೇಶಕರು ಶಿಕ್ಷಣ ಇಲಾಖೆ ಡಿಡಿಪಿಐ ಎಸ್.ಎಲ್.ಪ್ರಸನ್ನ ಕುಮಾರ್ ಆದೇಶ ಹೊರಡಿಸಿದ್ದಾರೆ