newsics.com
ಬೆಂಗಳೂರು : ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ (BMTC) ಪಾಸ್‌ಗಳ ದರದಲ್ಲಿ ಏರಿಕೆಯಾಗಿದೆ.
ನಾಳೆಯಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಆಗಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರ ಕುರಿತು ಪ್ರಕಟಣೆ ಹೊರಡಿಸಲಾಗಿದೆ.
ಸಾಂದರ್ಭಿಕ ಒಪ್ಪಂದದ ಮೇಲೆ ಒದಗಿಸುವ ಬಸ್‌ಗಳ ಬಾಡಿಗೆ ಪರಿಷ್ಕರಣೆ ಮಾಡಲಾಗಿದೆ. ಈ ದರವನ್ನು ಕೆಎಸ್‌ಆರ್‌ಟಿಸಿ ಶೇ. 15ರಷ್ಟು ಹೆಚ್ಚಳ ಮಾಡಿದೆ
ಬಿಎಂಟಿಸಿ ಡೈಲಿ ಪಾಸ್ – 70 ರೂ. (ಹಳೆಯ ದರ), 80 ರೂ. (ಹೊಸ ದರ)
ಬಿಎಂಟಿಸಿ ವಾರದ ಪಾಸ್ – 300 ರೂ. (ಹಳೆಯ ದರ), 350 ರೂ. (ಹೊಸ ದರ)
ಹಿರಿಯ ನಾಗರಿಕರ ಮಾಸಿಕ ಪಾಸ್ – 945 ರೂ. (ಹಳೆಯ ದರ), 1,080 ರೂ. (ಹೊಸ ದರ)
ಸಾಮಾನ್ಯ ಮಾಸಿಕ ಪಾಸ್ – 1,050 ರೂ. (ಹಳೆಯ ದರ), 1,200 ರೂ. (ಹೊಸ ದರ)
ನೈಸ್ ರೋಡ್ ಮಾಸಿಕ ಪಾಸ್ – 2,200 ರೂ. (ಹಳೆಯ ದರ), 2,350 ರೂ. (ಹೊಸ ದರ)