newsics.com
ರಾಮನಗರ: ಬೈಕ್ ಗೆ ಕೆಎಸ್‌ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.